ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

 ಪಾಲಿಟಿಕಲ್‌ ಎಕ್ಸ್‌ಪ್ರೆಸ್‌ನಲ್ಲಿ ಕರ್ನಾಟಕ ಕುರುಕ್ಷೇತ್ರ ಕಾವೇರಿರುವ ಸಂದರ್ಭದಲ್ಲಿ 31 ಜಿಲ್ಲೆಗಳ 224 ಕ್ಷೇತ್ರಗಳ ಪಾಲಿಟಿಕಲ್‌ ಸುದ್ದಿಗಳನ್ನು ಸಂಪೂರ್ಣವಾಗಿ ತಿಳಿಸಲಾಗಿದೆ.

Share this Video
  • FB
  • Linkdin
  • Whatsapp

 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿಷ್ಕಾರದ ಕೂಗು ಜೋರಾಗಿದ್ದು, ಕಳೆದ ಇಪ್ಪತ್ತೈದು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅದಲ್ಲದೆ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿಗಾಗಿ ಬಹಿಷ್ಕಾರವನ್ನು ಹಾಕಿದ್ದಾರೆ. ಇನ್ನು ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಶಾಸಕರ ವಿರುದ್ದ ಕಿಡಿಕಾರಿದ್ದಾರೆ. ಹಾಗೆ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಿವೇಶನ ರಹಿತರಿಗೆ ಸರ್ಕಾರದಿಂದ ನಿವೇಶನ ನೀಡದೆ ಇರುವುದರಿಂದ ಈ ಬಾರಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.

Related Video