ಸಿದ್ದು-ಪ್ರಸಾದ್ ಮುಖಾಮುಖಿ: ಒಂದೇ ವೇದಿಕೆಯಲ್ಲಿ ರಾಜಕೀಯ ಬದ್ಧ ವೈರಿಗಳು! ಮುಂದೇನಾಯ್ತು?

ರಾಜಕೀಯ ಬದ್ಧ ವೈರಿಗಳಾಗಿರುವ ಒಂದು ಕಾಲದ ದೋಸ್ತಿಗಳು, ಒಂದೇ ವೇದಿಕೆಯನ್ನು ಹಂಚಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, ಟಿ. ನರಸೀಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರು. 

Share this Video
  • FB
  • Linkdin
  • Whatsapp

ಮೈಸೂರು (ಅ.14): ರಾಜಕೀಯ ಬದ್ಧ ವೈರಿಗಳಾಗಿರುವ ಒಂದು ಕಾಲದ ದೋಸ್ತಿಗಳು, ಒಂದೇ ವೇದಿಕೆಯನ್ನು ಹಂಚಿಕೊಂಡ ಘಟನೆ  ಮೈಸೂರಿನಲ್ಲಿ ನಡೆದಿದೆ.

ಹೌದು, ಟಿ. ನರಸೀಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾದರು. 

ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಸಚಿವ ಸ್ಥಾನ ಕಳಕೊಂಡ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದರು. ಬಳಿಕ ಬಿಜೆಪಿ ಪಾಳೆಯ ಸೇರಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮವು ಅವರಿಬ್ಬರನ್ನು ಒಂದೇ ವೇದಿಕೆಗೆ ಕರೆತಂದಿದೆ. ಆದರೆ, ಮುಂದೇನಾಯ್ತು? ನೀವೇ ನೋಡಿ.... 

Related Video