
ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಸೇಲ್: ‘ಲುಲು’ಕುಮಾರ ಎಂದು ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗುತ್ತಿದೆ.
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ವಿವಾದದಲ್ಲಿ(Prajwal Revanna pen drive case) ಸಿಎಂ ಸಿದ್ದರಾಮಯ್ಯ(Siddaramaiah), ಡಿಕೆ ಶಿವಕುಮಾರ್(DK Shivakumar) ಕೈವಾಡ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಪೋಸ್ಟರ್ ವಾರ್ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾವಚಿತ್ರ ಇರುವ ಪೋಸ್ಟರ್‌ಗಳು(Posters) ಪ್ರತ್ಯಕ್ಷವಾಗಿವೆ. ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಮಾರಾಟ. ‘ಲುಲು’ಕುಮಾರ ಎಂದು ಪೋಸ್ಟರ್‌ನಲ್ಲಿ ಹಾಕಲಾಗಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಈ ರೀತಿ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಬಗ್ಗೆ ಸಿಎಂ , ಡಿಸಿಎಂ ವಿರುದ್ಧ ದೇವರಾಜಗೌಡ ಆರೋಪ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಪತ್ನಿ ಗೆಲುವಿಗಾಗಿ ನಟ ಶಿವರಾಜ್ ಕುಮಾರ್ ಉತ್ತರ ಕನ್ನಡದಲ್ಲಿ ಟೆಂಪಲ್ ರನ್!