News Hour: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಸಂತ್ರಸ್ತೆಯರ ಮೇಲೆ ಒತ್ತಡ..?
ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ತನಿಖೆಗೆ ಇಳಿದ ಎಸ್ಐಟಿ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದೆ. ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್ ನೀಡಿದ್ದಾರೆ. ವಿಚಾರಣೆಗೆ ಬರದಂತೆ ಸಂತ್ರಸ್ಥೆಯರ ಮೇಲೆ ಒತ್ತಡ ಹೇರಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು (ಮೇ. 1): ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ಸ್ಕ್ಯಾಂಡಲ್‌ನಿಂದ ಹೊರಬರೋದು ಹೇಗೆ ಎನ್ನುವ ನಿಟ್ಟಿನಲ್ಲಿ ಇಂದು ದೇವೇಗೌಡರ ಮನೆಯಲ್ಲಿ ಸಭೆ ಆಗಿದೆ. 'ನನ್ನನ್ನು ಕೆಣಕಿದ್ದಾರೆ. ನನಗೆ ಏನ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ನಡುವೆ ಕೇಸ್‌ನ ತನಿಖೆಗೆ ಇಳಿದ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದೆ. ದೂರು ನೀಡಿ ಮಹಿಳೆ ಒಬ್ಬಳನ್ನು ಹೊರತುಪಡಿಸಿ ಉಳಿದವರು ಯಾವುದೇ ರೆಸ್ಪಾನ್ಸ್ ನೀಡಿಲ್ಲ. ವಿಚಾರಣೆಗೆ ಬರದಂತೆ ಸಂತ್ರಸ್ಥೆಯರ ಮೇಲೆ ಒತ್ತಡ ಹೇರಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ.
ಪ್ರಜ್ವಲ್ ರೇವಣ್ಣ ವಿಡಿಯೋ ಹಗರಣ ರಿಲೀಸ್ ಮಾಡಿದ್ದು ಯಾರು? ಸ್ಫೋಟಕ ಮಾಹಿತಿ ಬಹಿರಂಗ!
ಪ್ರಜ್ವಲ್ ರೇವಣ್ಣ ಕೇಸ್ ಇಂದು ರಾಷ್ಟ್ರವ್ಯಾಪಿ ಸುದ್ದಿಯಾಗಿದೆ. ಪ್ರಜ್ವಲ್ ರೇವಣ್ಣ ಕೇಸ್ ಪ್ರಸ್ತಾಪ ಮಾಡಿ ರಾಹುಲ್ ಗಾಂಧಿ ಇಂದು ರಣಾಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ದೊಡ್ಡ ಕ್ರಿಮಿಲನ್ ದೇಶದಿಂದ ಹೇಗೆ ತಪ್ಪಿಸಿಕೊಂಡರು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.