Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

ಸಿದ್ದರಾಮಯ್ಯ ಅವರೇ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಸಿಎಂ ಸಿದ್ದರಾಮಯ್ಯರನ್ನು(Siddaramaiah) 2 ವಿಚಾರಕ್ಕೆ ಶ್ಲಾಘನೆ ಮಾಡಬೇಕು. ಮಗನ ರಾಜಕೀಯ ಭವಿಷ್ಯಕ್ಕಾಗಿ ಬೇರೆಯವರ ಪತನ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಂಥ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ(Pratap Simha) ಹೇಳಿದ್ದಾರೆ. ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ನೀವು ಪ್ರತಾಪಸಿಂಹ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂಥ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್. ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೀತು. ಬೆಳಗಾವಿ(Belagavi) ವಿಚಾರ ಮರೆಮಾಚಲು ನನ್ನ ವಿಷ್ಯ ಇಟ್ಟುಕೊಂಡು ಡೈವರ್ಟ್ ಮಾಡ್ತೀರಿ. ಮಾಧ್ಯಮಗಳ ಅಟೆನ್ಷನ್ ಡೈವರ್ಟ್ ಮಾಡಿದ್ರಿ. ನೀವು, ನಿಮ್ಮ ಸಚಿವ ಸಂಪುಟದ ಸದಸ್ಯರು, ಡಿಸಿಎಂ‌ ಎಲ್ಲರೂ ಪಾರ್ಲಿಮೆಂಟ್ ಪಾಸ್ ಇಟ್ಕೊಂಡು ಮಾತಾಡ್ತೀರಿ. ಸಂಸತ್ ಪಾಸ್ ವಿಚಾರ ಇಟ್ಕೊಂಡು ಟಾರ್ಗೆಟ್ ಮಾಡ್ತಿದ್ದೀರಿ. ನಿಮಗೆ 40 ವರ್ಷದ ಅನುಭವವಿದೆ. ನನ್ನ ಹೆಸರು ಇಟ್ಟುಕೊಂಡು, ತನಿಖೆ ನಡೆಸಬೇಕೆಂದು ವಿಷಯ ಹಸ್ತಾಂತರಿಸಿದ್ರಿ. ಇಲ್ಲಿ ನಿಮ್ಮ ಮಗ ಮಿನಿಟ್ ಕೊಡುವ ಬದಲು ನನ್ನ ವಿರುದ್ಧ ತನಿಖೆ‌‌ ಆಗಬೇಕು ಅಂತಾರೆ ಎಂದು ಮೈಸೂರಿನಲ್ಲಿ(Mysore) ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: Weekly-Horoscope: ಹೊಸ ವರ್ಷದ ಮೊದಲ ವಾರ ಯಾವ ರಾಶಿಗೆ ಶುಭ-ಅಶುಭ ?

Related Video