ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಆಕ್ರೋಶ

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ
ವರುಣದ ಸಿದ್ದರಾಮನ ಹುಂಡಿಯಲ್ಲಿ ನಡೆದ ಘಟನೆ
ಕಾರ್ಯಕರ್ತನ ಮೇಲಿನ ಹಲ್ಲೆಗೆ ಪ್ರತಾಪ್‌ ಸಿಂಹ ಆಕ್ರೋಶ 

Share this Video
  • FB
  • Linkdin
  • Whatsapp

ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್‌ ಗಾಯಗೊಂಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ, ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯರ ಸಂಸ್ಥಾನನಾ ?. ಅವರೇನು ಇಲ್ಲಿ ಪಾಳೇಗಾರಿಕೆ ಮಾಡುತ್ತಿದ್ದಾರಾ ?. ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪ್ರಚಾರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೇ, ನಿಮಗೂ ಎಲ್ಲಾ ಊರುಗಳಲ್ಲಿ ಇದೇ ಪರಿಸ್ಥಿತಿ ಎದುರಾಗಬಹುದು. ಆಗ ವರುಣ ಕ್ಷೇತ್ರದ ಶಾಂತಿ ಕದಡುತ್ತದೆ ಎಂದು ಪ್ರತಾಪ್‌ ಸಿಂಹ ಗುಡುಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ: ಸಿದ್ದುಗೆ ಪ್ರತಾಪ್‌ ಸಿಂಹ ಎಚ್ಚರಿಕೆ

Related Video