Pratham Paryatane: ವರುಣಾ ರೌಂಡ್ಸ್, ನಟ ಭಯಂಕರ ಪ್ರಥಮ್ ಮಾಡಿದ ಗ್ರೌಂಡ್ ರಿಪೋರ್ಟ್!

ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್‌ನ ಜಿ.ಟಿ. ದೇವೇಗೌಡ ಅವರು 35 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು (ಫೆ.05): ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್‌ನ ಜಿ.ಟಿ. ದೇವೇಗೌಡ ಅವರು 35 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜೆಡಿಎಸ್‌ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಕಳೆದ ಬಾರಿ ಒಳಸಂಚಿನಿಂದಾಗಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಈ ಬಾರಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಚ್ಚಾಟದಿಂದ ಚಾಮುಂಡೇಶ್ವರಿ ಭಾರತೀಯ ಜನತಾ ಪಾರ್ಟಿಗೆ ಗೆಲುವು ಸಿಗಲಿದೆ ಎಂದು ಬಿಜೆಪಿ ಕಾರ್ಯಕರ್ತರ ಪ್ರಮುಖ ವಾದವಾಗಿದೆ. ಆದರೆ ಬಹುಮುಖ್ಯವಾಗಿ ಜೆಡಿಎಸ್‌ನಿಂದ ಜಿ.ಟಿ. ದೇವೇಗೌಡರು ಮಾತ್ರ ಅಭ್ಯರ್ಥಿ ಘೋಷಣೆ ಆಗಿದ್ದು, ಉಳಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. 

Related Video