ಪ್ರವೀಣ್ ಹತ್ಯೆಯಿಂದ ಸರ್ಕಾರದ ವಿರುದ್ಧ ಸಿಡಿದೆದ್ದ ತಮ್ಮದೇ ಪಕ್ಷದ ಶಾಸಕರು!

ಎಸ್‌ಡಿಪಿಐ ಮುಖಂಡನ ಹತ್ಯೆಗೆ ಸ್ಕೆಚ್ ಹಾಕಿ ಬಂದಿದ್ದ ದುರ್ಷ್ಕರ್ಮಿಗಳ ಟಾರ್ಗೆಟ್ ಮಿಸ್ ಆಗಿದೆ. ಕೊಲೆ ಮಾಡಲು ಬಂದು ಬರಿಗೈಯಲ್ಲಿ ಹೋಗದ ದುರ್ಷರ್ಮಿಗಳು ಫಾಜಿಲ್ ಹತ್ಯೆ ಮಾಡಿದ್ದಾರೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ರಾಜ್ಯ ಸರ್ಕಾರದ ವಿರುದ್ಧ ಇದೀಗ ಬಿಜೆಪಿ ಶಾಸಕರು ಪ್ರತಿಭಟನೆ ಆರಂಭಿಸಿದ್ದಾರೆ. ಮೈಸೂರು, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರವೀಣ್ ನೆಟ್ಟೂರು ಹತ್ಯೆ ಪ್ರಕರಣದಿಂದ ಕೆರಳಿರುವ ಹಿಂದೂ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಶಾಸಕರು, ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. ಇತ್ತ ರಾಜ್ಯಜಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಇದುವರೆಗೆ ಕಠಿಣ ಕ್ರಮ ಕೈಗೊಳ್ಳದ ಗೃಹ ಸಚಿವ ಅರಗ ಜ್ಞಾನೇಂದ್ರ ಅಧಿಕೃತ ನಿವಾಸಕ್ಕೆ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ್ದಾರೆ. ಏಕಾಏಕಿ ನುಗ್ಗಿದ ಕಾರ್ಯಕರ್ತರು ಮನೆ ಒಳಗೆ ಪ್ರವೇಶಿಸಿದ್ದಾರೆ. 

Related Video