ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ ?: ಪ್ರಿಯಾಂಕ್ ಖರ್ಗೆ ಲೇವಡಿ

ಬಿಜೆಪಿಗೆ ವಿರೋಧ ಪಕ್ಷದ ನಾಯಕರೇ ಇಲ್ಲ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

Share this Video
  • FB
  • Linkdin
  • Whatsapp

ಬಿಜೆಪಿಗೆ ವಿರೋಧ ಪಕ್ಷದ ನಾಯಕರು ಎಲ್ಲಿದ್ದಾರೆ. ಇದು ಕೇಂದ್ರದ ಬಿಜೆಪಿ(BJP) ನಾಯಕರು ಸದನಕ್ಕೆ ಮಾಡುತ್ತಿರುವ ಅಪಮಾನ ಎಂದು ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಲೇವಡಿ ಮಾಡಿದ್ದಾರೆ. ಬಿಜೆಪಿಯವರು ಸದನದ ಪರಂಪರೆಗೆ ಒಂದು ಕಪ್ಪು ಚುಕ್ಕೆ ಇಡುತ್ತಿದ್ದಾರೆ. ಆಡಳಿತ ಪಕ್ಷದ ರೀತಿ ವಿರೋಧ ಪಕ್ಷವೂ ಇರಬೇಕು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇದೆ ವೇಳೆ ಜೈನಮುನಿ ಹತ್ಯೆ (Jain monk murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ತನಿಖಾ ಸಂಸ್ಥೆಗಳಿಗೆ ಸಾಮರ್ಥ್ಯ ಇಲ್ಲ ಎಂದು ಅಂದುಕೊಂಡಿದ್ದಾರಾ. ಇವರ ಹತ್ತಿರ ದಾಖಲೆ ಇದ್ದರೇ, ಗೃಹ ಇಲಾಖೆ ಕೊಡಿ ಎಂದು ಸಿದ್ದು ಸವದಿ(Siddu savadi) ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ: ತಂದೆ ನೋಡಲು ಹೋಗಿ ಅನಾರೋಗ್ಯಕ್ಕೆ ತುತ್ತಾದ ಮದನಿ

Related Video