Priyanka Gandhi in Karnataka: ನಾಳೆ ಕರ್ನಾಟಕ ರಣಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ! ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ

ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಚುನಾವಣಾ ಪ್ರಚಾರ 
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಪರ ಮತಯಾಚನೆ
ನಾಳೆ ಸಂಜೆ 4ಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ

Share this Video
  • FB
  • Linkdin
  • Whatsapp

ಕರ್ನಾಟಕ ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಇದೆ.
ಕರ್ನಾಟಕ(Karnataka) ಲೋಕಸಭಾ ಚುನಾವಣಾ(Lok Sabha elections) ಪ್ರಚಾರಕ್ಕೆ ಪ್ರಿಯಾಂಕ ಗಾಂಧಿ(Priyanka Gandhi) ಎಂಟ್ರಿ ಕೊಡಲಿದ್ದಾರೆ. ರಾಹುಲ್ ಗಾಂಧಿ(Rahul Gandhi) ಪ್ರಚಾರ ಮಾಡಿ ಹೋದ ಬೆನ್ನಲ್ಲೇ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಾರೆ. ನಾಳೆ ಕರ್ನಾಟಕಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿತ್ರದುರ್ಗ(Chitradurga) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಒಂದೇ ದಿನ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. ನಾಳೆ ಬೆಳಗ್ಗೆ 11:30ಕ್ಕೆ ಚಿತ್ರದುರ್ಗದ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ನಾಳೆ ಸಂಜೆ 4 ಗಂಟೆಗೆ ಬೆಂಗಳೂರು ದಕ್ಷಿಣ(Bengaluru South) ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ: Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Related Video