ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಅಕ್ಕಿ ಸರಬರಾಜು ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದೋಖಾ ಸಿರೀಸ್ ಮುಂದುವರೆಸಿದ್ದು, ನೀಡಿದ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆ.ಜಿ ಅಕ್ಕಿ ನೀಡದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು‌.ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನರಿಗೆ ಮೋಸವಾಗಿದೆ. ಬಡವರು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರು ನೀಡಿದ ಮಾತು ತಪ್ಪಿದ್ದಾರೆ. ಅಕ್ಕಿ ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರ ಆಹಾರ ಭದ್ರತೆ ಕಾಯ್ದೆಯಡಿ ಎಲ್ಲ ರಾಜ್ಯಗಳಿಗೂ 5 ಕೆ.ಜಿ ಅಕ್ಕಿ ಕೊಡುತ್ತ ಬಂದಿದೆ ಎಂದರು.

ಇದನ್ನೂ ವೀಕ್ಷಿಸಿ: ವರುಣ್ ತೇಜ್-ಲಾವಣ್ಯಾ ತ್ರಿಪಾಠಿ ನಿಶ್ಚಿತಾರ್ಥ: ಈ ವಿಷಯ ಗೊತ್ತಾದ ತಕ್ಷಣ ನೆಟ್ಟಿಗರು ಹುಡುಕಿದ್ದು ಏನ್‌ ಗೊತ್ತಾ?

Related Video