Asianet Suvarna News Asianet Suvarna News
breaking news image

ತಲೆಮರೆಸಿಕೊಂಡು 2 ವಾರವಾದ್ರೂ ದಿವ್ಯಾ ಬಂಧನ ಯಾಕಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ. 

'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'

ದಿವ್ಯಾ ಹಾಗರಗಿ ಎಲ್ಲಿ ಎಂಬುದು ಇನ್ನೂ ಪತ್ತೆಯಿಲ್ಲ. ಇಲ್ಲಿಯವರೆಗೆ ಅವರನ್ನು ರಕ್ಷಣೆ ಮಾಡ್ತಿರೋದು ಯಾಕೆ ? ಪ್ರಮುಖ ಆರೋಪಿ ಎಲ್ಲಿದ್ದಾರೆ ಎಂಬುದನ್ನು ಮೊದಲು ಪತ್ತೆ ಮಾಡಿ. ಅವರನ್ನು ರಕ್ಷಣೆ ಮಾಡೋ ಕೆಲಸ ಮಾಡಬೇಡಿ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

Video Top Stories