ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಗೆಲ್ತೇನೆ: ರಘು ಆಚಾರ್
ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಗೆಲ್ತೇನೆ.. ಕುಮಾರಣ್ಣ ಅವಕಾಶ ಕೊಟ್ರೆ ವರುಣಾದಿಂದ ಸ್ಪರ್ಧಿಸುತ್ತೇನೆ.. ಎಂದು ರಘು ಆಚಾರ್ ಹೇಳಿದ್ದು, ಸಿದ್ದರಾಮಯ್ಯ ವಿರುದ್ಧ ತೊಡ ತಟ್ಟುತ್ತಾರಾ ರಘು ಆಚಾರ್ ಎಂದು ನೋಡಬೇಕಿದೆ.
ವರುಣ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಟಿಕೆಟ್ ನೀಡಿದ್ದೇ ಆದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿಯೇ ತೀರುವೆ ಎಂದು ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ರಘು ಆಚಾರ್ ಹೇಳಿದರು. ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿಯಲ್ಲಿ ಮಾತನಾಡಿ ಚಿತ್ರದುರ್ಗದಲ್ಲಿ ಪತ್ನಿ ನಿಲ್ಲಿಸಿ ವರುಣದಿಂದ ನಾನು ಸ್ಪರ್ಧಿಸುತ್ತೇನೆ. ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ, ಗೆದ್ದು ತೋರಿಸುವೆ ಎಂದರು ಹಾಗೇ ಸಣ್ಣ ಜಾತಿಯವರಿಗೆ ರಾಷ್ಟ್ರೀಯ ಪಕ್ಷವೆಂದು ಹೇಳಿಕೊಳ್ಳುವ ಕಾಂಗ್ರೆಸ್ ಒಂದೂ ಟಿಕೆಟ್ ಕೊಟ್ಟಿಲ್ಲ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಜವಾದ ನಾಯಕರು. ನಾನು ರಾಜಕೀಯ ಶುರು ಮಾಡುವಾಗಲೂ ಕಲ್ಲಹಳ್ಳಿಯ ಡಿ. ದೇವರಾಜ ಅರಸು ಸಮಾಧಿಗೆ ಪೂಜೆ ಸಲ್ಲಿಸಿದ್ದೆ. ಜೆಡಿಎಸ್ ಸೇರ್ಪಡೆ ಬಳಿಕವೂ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ತಿಳಿಸಿದರು.