Asianet Suvarna News Asianet Suvarna News

Party Rouds: ಯುವನಿಧಿ ಘೋಷಣೆ ಮಾಡಿದ ರಾಹುಲ್‌ ಗಾಂಧಿ!

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಹುಲ್‌ ಗಾಂಧಿ ಮೊದಲ ಬಾರಿಗೆ ಸಮಾವೇಶ ನಡೆಸಿದರು. ಈ ವೇಳೆ ರಾಹುಲ್‌ ಗಾಂಧಿ ಯುವನಿಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್‌ ಪಕ್ಷದ ನಾಲ್ಕನೇ ಗ್ಯಾರಂಟಿಯಾಗಿದೆ. 

ಬೆಳಗಾವಿ (ಮಾ.20): ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಹುಲ್‌ ಗಾಂಧಿ ಮೊದಲ ಬಾರಿಗೆ ಸಮಾವೇಶ ನಡೆಸಿದರು. ಈ ವೇಳೆ ರಾಹುಲ್‌ ಗಾಂಧಿ ಯುವನಿಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್‌ ಪಕ್ಷದ ನಾಲ್ಕನೇ ಗ್ಯಾರಂಟಿಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ಹಾಗೂ ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಏನಿದು ಯುವನಿಧಿ ಯೋಜನೆ?: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಘೋಷಣೆ ಮಾಡಿರುವ ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ 1,500 ರೂ. ಭತ್ಯೆ ನೀಡಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗ ಪದವೀಧರರಿಗೆ ಈ ಭತ್ಯೆ ಸಿಗಲಿದೆ.