'ಕೈ' ಟಿಕೆಟ್ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್ ಕಮಿಟಿಯಲ್ಲಿ ಖರ್ಗೆ, ರಾಹುಲ್ ಗರಂ
ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್, ಖರ್ಗೆ ಕ್ಲಾಸ್ ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ. ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ. ಖಂಡ್ರೆ ಭಾಗಿಯಾಗಿದ್ದರು.