ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ: ಲಿಂಗಾಯತ ಮತಕ್ಕಾಗಿ 'ಕೈ' ಹೊಸ ತಂತ್ರ

ರಾಜ್ಯದಲ್ಲಿ ಮತ್ತೊಮ್ಮೆ ರಾಹುಲ್‌ ಗಾಂಧಿ ಪ್ರಚಾರ
ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಮತಬೇಟೆ
ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌

Share this Video
  • FB
  • Linkdin
  • Whatsapp

ಬಾಗಲಕೋಟೆ: ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಜಾತಿ ಲೆಕ್ಕಾಚಾರದ ಮತಗಳ ಮೇಲೆ ಕಾಂಗ್ರೆಸ್‌ ಕಣ್ಣಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಬಸವಣ್ಣನ ಐಕ್ಯ ಸ್ಥಳವಾದ ಕೂಡಲಸಂಗಮದಲ್ಲಿ ಏಪ್ರಿಲ್ 23ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ಹಮ್ಮಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಒಟ್ಟಿನಲ್ಲಿ ನಾಳೆಯ ಕಾಂಗ್ರೆಸ್‌ ಕಾರ್ಯಕ್ರಮ ಆ ಭಾಗದ ಲಿಂಗಾಯತ ಮತಗಳನ್ನು ಸೆಳೆಯಲು ಮಾಡುತ್ತಿರುವುದು ಎಂಬುದಂತೂ ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ: ವರುಣ ಮೇಲೆ ಬಿಜೆಪಿ ಕಣ್ಣು: ಸಿದ್ದು ಮಣಿಸಲು ಕೇಸರಿ ರಣತಂತ್ರ

Related Video