ಖರ್ಗೆ ದಿಲ್ಲಿಗೆ ತೆರಳುತ್ತಿದ್ದಂತೆ ರಾಜ್ಯದಲ್ಲಿ ಸಂಚಲನ, ಸಿದ್ದು ಡಿಕೆಶಿ ಗೌಪ್ಯ ಮಾತುಕತೆ

ರಾಜ್ಯಸಭೆ ಚುನಾವಣೆಯಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಡಿ.ಕೆ.ಶಿವಕುಮಾರ್‌ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರು ನಿರ್ಧರಿಸಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 03): ರಾಜ್ಯಸಭೆ ಚುನಾವಣೆಯಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಡಿ.ಕೆ.ಶಿವಕುಮಾರ್‌ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರು ನಿರ್ಧರಿಸಿದ್ದಾರೆ.

ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ನಾಯಕರೊಂದಿಗೆ ಮಾತನಾಡಿದ್ದು, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮದೇ ಆದ ತಂತ್ರ ಅನುಸರಿಸಲಾಗುವುದು. ಒಂದು ವೇಳೆ ಗೆಲ್ಲಲಾಗದಿದ್ದರೂ ಪಕ್ಷಕ್ಕೆ ಹಲವು ರೀತಿಯಲ್ಲಿ ಇದು ಸಹಕಾರಿಯಾಗಲಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಯನ್ನು ಹಿಂಪಡೆಯದಿರಲು ತೀರ್ಮಾನಿಸಿದ್ದು, ನೀವು ಆತ್ಮಸಾಕ್ಷಿ ಪ್ರಕಾರ ಮತ ಹಾಕಿ ಎಂದು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಭೇಟಿಯಾಗುತ್ತಿದ್ದಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಎರಡನೇ ಅಭ್ಯರ್ಥಿ ಮುಂದುವರೆಸುವ ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರು ದೂರವಾಣಿ ಕರೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರಿಗೂ ಅಂತಿಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Related Video