ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅಂತ ಗೊತ್ತಾಗಲಿದೆ: ಎಚ್‌ಡಿಕೆ

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌, ಜಗ್ಗೇಶ್‌ ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದೆ. 

ರಾಜ್ಯಸಭಾ ಫೈಟ್: ಜೆಡಿಎಸ್ ಬಂಡಾಯ ಶಾಸಕರ ನಡೆ ಏನು..?

'ಚುನಾವಣಾ ಫಲಿತಾಂಶ ಏನೇ ಬರಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಅನ್ನೋದು ಕರ್ನಾಟಕ ಮಾತ್ರವಲ್ಲ, ದೇಶದ ಮಟ್ಟದಲ್ಲಿ ಗೊತ್ತಾಗಲಿದೆ. ಸಿದ್ದರಾಮಯ್ಯನವರ ನಿಜವಾದ ಬಣ್ಣ ಇಂದು ಜನತೆಗೆ ಗೊತ್ತಾಗಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಳುಗಲಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

Related Video