Asianet Suvarna News Asianet Suvarna News
breaking news image

ರಾಜ್ಯಸಭೆಯ 4, ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ, ಅಭ್ಯರ್ಥಿಗಳಿಂದ ಲಾಬಿ ಶುರು

ಬರುವ ಜೂನ್‌ನಲ್ಲಿ ತೆರವಾಗಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳು ಮತ್ತು ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಮೇ ತಿಂಗಳಿನಲ್ಲಿ ವೇಳಾಪಟ್ಟಿಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪಾಳೆಯದಲ್ಲಿ ತೆರೆಮರೆಯ ಚಟುವಟಿಕೆಗಳು ಆರಂಭಗೊಂಡಿವೆ.

ಬೆಂಗಳೂರು (ಏ. 27):  ಬರುವ ಜೂನ್‌ನಲ್ಲಿ ತೆರವಾಗಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳು ಮತ್ತು ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಮೇ ತಿಂಗಳಿನಲ್ಲಿ ವೇಳಾಪಟ್ಟಿಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪಾಳೆಯದಲ್ಲಿ ತೆರೆಮರೆಯ ಚಟುವಟಿಕೆಗಳು ಆರಂಭಗೊಂಡಿವೆ.

ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭೆಯ ನಾಲ್ವರು ಸದಸ್ಯರು ಜೂ.30ರಂದು ಮತ್ತು ವಿಧಾನ ಪರಿಷತ್ತಿನ ಏಳು ಸದಸ್ಯರು ಜೂನ್‌ 14ರಂದು ನಿವೃತ್ತಿ ಹೊಂದಲಿದ್ದಾರೆ.

ರಾಜ್ಯಸಭೆಯಿಂದ ಬಿಜೆಪಿಯ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಕೆ.ಸಿ.ರಾಮಮೂರ್ತಿ, ಕಾಂಗ್ರೆಸ್ಸಿನ ಜೈರಾಂ ರಮೇಶ್‌ ಅವರ ಅವಧಿ ಮುಗಿಯಲಿದೆ. ಕಾಂಗ್ರೆಸ್‌ ಸದಸ್ಯರಾಗಿದ್ದ ಆಸ್ಕರ್‌ ಫರ್ನಾಂಡಿಸ್‌ ಇತ್ತೀಚೆಗೆ ನಿಧನ ಹೊಂದಿದ್ದರಿಂದ 1 ಸ್ಥಾನ ತೆರವಾಗಿದೆ.

Video Top Stories