Asianet Suvarna News Asianet Suvarna News

ಒಲ್ಲದ ಮನಸ್ಸಿನಿಂದ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆಯಿತಾ ಸಿದ್ದರಾಮಯ್ಯ ಸಂಪುಟ?

ಡಿಕೆ ಶಿವಕುಮಾರ್ ಕೇಸ್ ವಾಪಸ್ ಕುರಿತು ಕಾಂಗ್ರೆಸ್ ನಾಯಕರ ಪ್ರತಿಕ್ರಿಯೇನು? ಪ್ರತಿಭಟನೆಗೆ ಸಜ್ಜಾದ ಬಿಜೆಪಿ, ಕ್ಯಾಪ್ಟನ್ ಪ್ರಾಂಜಲ್‌ಗೆ ಅಂತಿಮ ಗೌರವ ನಮನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ. 

ಸಿದ್ದರಾಮಯ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೆಗೆದುಕೊಂಡು ನಿರ್ಣಯ ಭಾರಿ ಚರ್ಚೆಯಾಗುತ್ತಿದೆ. ಡಿಕೆ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ಪಡೆಯುವ ನಿರ್ಧಾರದ ಹಿಂದೆ ಹಲವು ಚರ್ಚೆ ನಡೆಯುತ್ತಿದೆ. ಪ್ರಮುಖವಾಗಿ ಒಲ್ಲದ ಮನಸ್ಸಿನಿಂದ ಕೇಸ್ ವಾಪಸ್ ಪಡೆಯುವ ನಿರ್ಧಾರ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ತನಿಖೆಯನ್ನು ಸಿಬಿಐ ಮಾಡುತ್ತಿದೆ. ಈ ತನಿಖೆಯನ್ನು ಸಿಬಿಐನಿಂದ ವಾಪಸ್ ಪಡೆಯಲು ಸಿದ್ದರಾಮಯ್ಯ ಸರ್ಕಾರ ಸಂಪುಟ ನಿರ್ಧರಿಸಿದೆ. ಈ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ.

Video Top Stories