ಆರ್.ಆರ್. ನಗರ ಬೈ ಎಲೆಕ್ಷನ್ ಟಿಕೆಟ್: ಗೆಳೆಯನ ಪರ ಸಚಿವ ಸುಧಾಕರ್ ಬ್ಯಾಟಿಂಗ್
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಇದರ ಮಧ್ಯೆ ಮುನಿರತ್ನ ಜೊತೆ ಕೈ ಬಿಟ್ಟು ಕಮಲ ಹಿಡಿದು ಸಚಿವರಾಗಿರುವ ಡಾ. ಸುಧಾಕರ್ ಅವರು ಪ್ರತ್ರಿಕ್ರಿಯಿಸಿದ್ದಾರೆ.
ಬೆಂಗಳೂರು, (ಸೆ.29): ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ದೊಡ್ಡ ತಲೆನೋವಾಗಿದೆ.
ಗರಿಗೆದರಿದ ರಾಜಕೀಯ ಚಟುವಟಿಕೆ: RR ನಗರ ಅಭ್ಯರ್ಥಿ ಆಯ್ಕೆ ಕುತೂಹಲ
ಅದರಲ್ಲೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಇದರ ಮಧ್ಯೆ ಮುನಿರತ್ನ ಜೊತೆ ಕೈ ಬಿಟ್ಟು ಕಮಲ ಹಿಡಿದು ಸಚಿವರಾಗಿರುವ ಡಾ. ಸುಧಾಕರ್ ಅವರು ಪ್ರತ್ರಿಕ್ರಿಯಿಸಿದ್ದಾರೆ.