Asianet Suvarna News Asianet Suvarna News

ರಾರಾ, ಶಿರಾದಲ್ಲಿ ಪರ್ಸೆಂಟೇಜ್ ಲೆಕ್ಕಾಚಾರ ಶುರು; ಗೆಲ್ಲೋ ಕುದುರೆ ಯಾರು?

ಪ್ರತಿಷ್ಠೆಯ ಕಣವಾಗಿರುವ ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
 

ಬೆಂಗಳೂರು (ನ. 05): ಪ್ರತಿಷ್ಠೆಯ ಕಣವಾಗಿರುವ ಆರ್‌.ಆರ್‌.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ: ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

 ಮೂರು ಪಕ್ಷಗಳು ಸೇರಿದಂತೆ ಪಕ್ಷೇತರರಿಗೂ ಮತಗಳು ಹಂಚಿಕೆಯಾಗಿರುವ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ. ಮತದಾರರನ್ನು ಸೆಳೆಯುವಲ್ಲಿ ಎಡವಿರುವ ಬಗ್ಗೆ ಕಾರ್ಯತಂತ್ರ ರೂಪಿಸಿರುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಪಕ್ಷದ ಅಭ್ಯರ್ಥಿಗಳ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಗೆಲುವು-ಸೋಲಿನ ಆತಂಕ ಪ್ರಾರಂಭವಾಗಿದೆ.

 

Video Top Stories