Asianet Suvarna News Asianet Suvarna News

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

Oct 16, 2021, 4:17 PM IST

ಬೆಂಗಳೂರು, (ಅ.16): ವಿಶ್ವವಿದ್ಯಾಯಲಗಳಲ್ಲಿ ಸಿಂಡಿಕೇಟ್‌ ನೇಮಕ ವಿಚಾರದಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ.

RSSನ 4 ಸಾವಿರ IAS, IPS ಅಧಿಕಾರಿಗಳಾಗಿದ್ದಾರೆ: ಗುಡುಗಿದ ಕುಮಾರಸ್ವಾಮಿ

 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ಬಿಜೆಪಿ ಕಾರ್ಯಕರ್ತರು ಅಂದರೆ ಆರ್‌ಎಸ್‌ಎಸ್‌ (RSS) ಕಾರ್ಯಕರ್ತರು. ದೇಶದಲ್ಲಿ ಬಿಜೆಪಿಯ ಕಾರ್ಯಕರ್ತರು, 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದೀಗ ಮತ್ತೆ ಬಾಂಬ್ ಸಿಡಿಸಿದ್ದಾರೆ.