ಶಾಸಕ ಸ್ಥಾನಕ್ಕೆ ಎಸ್.ಆರ್.ಶ್ರೀನಿವಾಸ್ ರಾಜೀನಾಮೆ,ಕಾಂಗ್ರೆಸ್ ಸೇರಲು ಸಜ್ಜು
ಜೆಡಿಎಸ್ನಿಂದ ಉಚ್ಛಾಟಿತಗೊಂಡಿರುವ ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಶ್ರೀನಿವಾಸ್ ತಿಳಿಸಿದ್ದಾರೆ. ಅದಲ್ಲದೆ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮಾತಯನಾಡಿದ ಅವರು ನಮ್ಮ ತಾಲೂಕಿನಲ್ಲಿರುವ ಎಲ್ಲ ಮುಖಂಡರ ಜೊತೆ ಮಾತನಾಡಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ ದೇವೇಗೌಡರಿಗೆ, ಕುಮಾರಸ್ವಾಮಿ, ರೇವಣ್ಣ ಪಕ್ಷದ ಎಲ್ಲರಿಗೂ ಧನ್ಯವಾದಗಳು. 20 ವರ್ಷಗಳಿಂದ ಭಾವನಾತ್ಮಕ ಸಂಭದವನ್ನ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.