'ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ'; ಡಿಸಿಎಂ
ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೀರನವಾಡಿ ಚೌಕದಲ್ಲಿ ಚೆನ್ನಮ್ಮ ಪಡೆಯ ಮಹಿಳಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಿಗಿ ಭದ್ರತೆ ಒದಗಿಸಲಾಗಿದೆ. ಪೀರನವಾಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.
ಬೆಳಗಾವಿ (ಆ. 28): ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೀರನವಾಡಿ ಚೌಕದಲ್ಲಿ ಚೆನ್ನಮ್ಮ ಪಡೆಯ ಮಹಿಳಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಬಿಗಿ ಭದ್ರತೆ ಒದಗಿಸಲಾಗಿದೆ. ಪೀರನವಾಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ ಬಿಗಿ ಭದ್ರತೆ ಒದಗಿಸಲಾಗಿದೆ.
'ಗೃಹ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸುವಂತೆ ತಿಳಿಸಿದ್ದೇನೆ. ಎರಡೂ ಕಡೆಯವರ ಮುಖಂಡರನ್ನು ಕರೆಸಿ ಮಾತನಾಡಲು ಸ್ಥಳೀಯ ಶಾಸಕರಿಗೆ ತಿಳಿಸಿದ್ದೇನೆ' ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.