ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ, ಮುಂದೆ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವೆ : ಸಂತೋಷ್‌ ಲಾಡ್‌

ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್‌ ಲಾಡ್‌ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಂತೋಷ್‌ ಲಾಡ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಬಗ್ಗೆ ಮಾತನಾಡಿರುವ ಅವರು, ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಜನ ಕಾಂಗ್ರೆಸ್‌ ಪಕ್ಷದ ಪರ ಒಲವನ್ನು ತೋರಿಸಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ವಿನಯ್‌ ಕುಲಕರ್ಣಿ, ನಾನು ಇಬ್ಬರೂ ಗೆದ್ದಿದ್ದೀವಿ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾಳಜಿ ವಹಿಸಿ, ಇಲ್ಲೇ ಉಳಿದು ಜನರ ಕೆಲಸ ಮಾಡುತ್ತೇನೆ. ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಸಂತೋಷ್‌ ಲಾಡ್‌ ಹೇಳಿದ್ದಾರೆ. ಸಂತೋಷ್‌ ಲಾಡ್‌ ಸುಮಾರು 11 ಮತಗಳ ಅಂತರದಿಂದ ಗೆದ್ದಿದ್ದು, ಬಿಜೆಪಿಯ ನಾಗರಾಜ್‌ ಛಬ್ಬಿ ಲಾಡ್‌ ಎದುರು ಸೋಲನ್ನು ಕಂಡಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

Related Video