ಕಾಂಗ್ರೆಸ್‌ನಿಂದ ರಾಜಭವನ ಚಲೋ, ಕೈ ನಾಯಕರು ಪೊಲೀಸರ ವಶ..!
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರದಲ್ಲಿ ತಾರತಮ್ಯ ಮತ್ತು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರದಲ್ಲಿ ತಾರತಮ್ಯ ಮತ್ತು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಸರ್ಕಲ್ ಬಳಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
l