ನಾಳೆ ಮತ ಎಣಿಕೆ ಹಿನ್ನೆಲೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ....!
ಕರ್ನಾಟಕ ವಿಧಾನ ಚುನಾವಣೆಯ ಫಲಿತಾಂಶ ಮೇ 13 (ಶನಿವಾರ) ದಂದು ಪ್ರಕಟವಾಗುವ ಹಿನ್ನಲೆಯಲ್ಲಿ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಕರ್ನಾಟಕ ವಿಧಾನ ಚುನಾವಣೆಯ ಫಲಿತಾಂಶ ಮೇ 13 (ಶನಿವಾರ) ದಂದು ಪ್ರಕಟವಾಗುವ ಹಿನ್ನಲೆಯಲ್ಲಿ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಯಾವುದೇ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರೂ ಸಂಭ್ರಮಾಚಣೆ ಮಾಡುವಂತಿಲ್ಲ. ಈಗಾಗಲೇ ನಿಗದಿಗೊಂಡಿರುವ ಮದುವೆ ಹಾಗೂ ಆಕಸ್ಮಿಕವಾಗಿ ನಡೆಯುವ ಸಾವಿನ ಅಂತ್ಯಸಂಸ್ಕಾರಕ್ಕೆ ಮಾತ್ರ 5ಕ್ಕಿಂತ ಹೆಚ್ಚು ಜನರು ಸೇರಲು ಅವಕಾಶ ನೀಡಲಾಗುತ್ತದೆ.
ರಾಜ್ಯ ರಾಜಧಾನಿಯಲ್ಲಿ ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನಲೆಯಿದೆ. ಮತ ಎಣಿಕೆ ಕೇಂದ್ರಗಳನ್ನೊಳಗೊಂಡಂತೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಗುಪ್ತವಾರ್ತೆ ಮಾಹಿತಿ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಬಿಗಿ ಭದ್ರತಾ ಕ್ರಮಕ್ಕೆ ಮುಂದಾಗಿದ್ದಾರೆ.