ನನಗೆ ಟಿಕೆಟ್ ಯಾಕಿಲ್ಲ? ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಭಾವುಕ!
ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಹೊರನಡೆದಿದ್ದಾರೆ. ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾತನಾಡಿದ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮದ ಜೊತೆ ಶೆಟ್ಟರ್ ಆಡಿದ ಮಾತುಗಳು ಇಲ್ಲಿವೆ.
ಯಾವುದೇ ಹುದ್ದೆಯ ಆಸೆ ಇಲ್ಲ. ಶಾಸಕನಾಗಿ ಕೆಲಸ ಮಾಡಲು ಅವಕಾಶ ಕೇಳಿದ್ದೇನೆ. ಆದರೆ ಬಿಜೆಪಿ ಹೈಕಮಾಂಡ್ ಅವಕಾಶ ನಿರಾಕರಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸ್ಪೀಕರ್‌ಗೆ ರಾಜೀನಾಮೆ ಪತ್ರ ನೀಡಿದ ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಯಾವುದೇ ಆರೋಪವಿಲ್ಲ. ಯಾವುದೇ ಸಿಡಿ ಇಲ್ಲ. ಆರೋಗ್ಯವಾಗಿದ್ದೇನೆ. ವಯಸ್ಸಾಗಿಲ್ಲ. ಹೀಗಿದ್ದರೂ ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಿದೆ. ಪಕ್ಷವನ್ನು ಸಂಘಟನೆ ಮಾಡಿದ್ದೇನೆ. ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ