Asianet Suvarna News Asianet Suvarna News

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆಹಲಿಗೆ ತೆರಳಲಿರುವ ಸಾಹುಕಾರ್

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಲು ನಿರ್ಧಾರಿಸಿದ್ದಾರೆ.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದು, ಡಿಕೆಶಿಯನ್ನು ರಾಜಕೀಯವಾಗಿ ಮುಗಿಸುವುದಾಗಿ ಶಪಥ ಮಾಡಿದ್ದಾರೆ. ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ. ರಮೇಶ್‌ ಜಾರಕಿಹೊಳಿ ಇಂದು ದೆಹಲಿಗೆ ತೆರಳಲು ನಿರ್ಧಾರಿಸಿದ್ದು, ದೆಹಲಿಯಲ್ಲಿ ಅಮಿತ್‌ ಶಾ ಭೇಟಿಯಾಗಲು ಸಾಹುಕಾರ್‌ ಪ್ಲಾನ್‌ ಮಾಡಿದ್ದಾರೆ. ಗೃಹ ಸಚಿವರನ್ನು ಭೇಟಿಯಾಗಿ ಸಿಬಿಐಗೆ ಕೇಸ್ ಹಸ್ತಾಂತರಿಸುವಂತೆ ಮನವಿ ಮಾಡಲಿದ್ದಾರೆ.

Video Top Stories