ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

ಮಾಜಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಇಂದು ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ.
 

Share this Video
  • FB
  • Linkdin
  • Whatsapp

ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ದಿಢೀರ್‌ ಅಂತಾ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಬಿಜೆಪಿ(BJP) ತೊರೆದು ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಸುದ್ದಿ ಎಲ್ಲೆಡೆ ಹಬ್ಬುತ್ತಿದೆ. ಈ ಸುದ್ದಿ ಬೆನ್ನಲ್ಲೇ ಶಂಕರಪಾಟೀಲ್ ಮುನೇನಕೊಪ್ಪ ಸುದ್ದಿಗೋಷ್ಟಿ ಮಹತ್ವ ಪಡೆದುಕೊಂಡಿದೆ. ಕಳೆದೆರಡು ತಿಂಗಳಿಂದ ಈ ಬಗ್ಗೆ ಬಿಸಿಬಿಸಿ‌ ಚರ್ಚೆ ನಡೆಯುತ್ತಿದೆ. ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಶಂಕರಪಾಟೀಲ್ ಮುನೇನಕೊಪ್ಪ ಸೋತ್ತಿದ್ದರು. ಇಂದು ನಡೆಯುವ ಸುದ್ದಿಗೋಷ್ಠಿಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ಮುನೇನಕೊಪ್ಪ. ಹುಬ್ಬಳ್ಳಿ ಪ್ರವಾಸಿ ಮಂದಿರಲ್ಲಿ ಮಧ್ಯಾಹ್ನ 12 ಗಂಟೆಗೆ ಮಹತ್ವ ಸುದ್ದಿಗೊಷ್ಠಿ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ: ಕಟ್ಟಡದ ಮೇಲಿಂದ ಬಿತ್ತು ಕಂದಮ್ಮ..! ಭಯಂಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

Related Video