ಕಲಬುರಗಿ ಪಾಲಿಕೆ: 'ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಪಕ್ಕಾ'

*  ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತ
*  ಶರಣಪ್ರಕಾಶ್‌ ಪಾಟೀಲ್‌ ಸುಳಿವು 
*  ಕಾಂಗ್ರೆಸ್‌ ಸದಸ್ಯರನ್ನ ಖರೀದಿಸೋದು ಬಿಜೆಪಿಗೆ ಸಾಧ್ಯವೇ ಇಲ್ಲ 

First Published Sep 11, 2021, 3:33 PM IST | Last Updated Sep 11, 2021, 3:33 PM IST

ಕಲಬುರಗಿ(ಸೆ.11):  ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಮಾಜಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸುಳಿವು ನೀಡಿದ್ದಾರೆ. ಈಗಾಗಲೇ ಜೆಡಿಎಸ್‌ ಜತೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್‌ ಜತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ. ಕಾಂಗ್ರೆಸ್‌ ಸದಸ್ಯರನ್ನ ಖರೀದಿಸೋದು ಬಿಜೆಪಿಗೆ ಸಾಧ್ಯವೇ ಇಲ್ಲ ಅಂತ ಹೇಳಿದ್ದಾರೆ. 

ಕಲಬುರಗಿ ಪಾಲಿಕೆ: ಬಿಜೆಪಿ ಜೊತೆ ಗುರುತಿಸಿಕೊಳ್ಳದಂತೆ ಜೆಡಿಎಸ್‌ ಎಚ್ಚರಿಕೆ ಹೆಜ್ಜೆ

Video Top Stories