ಹೊಸಕೋಟೆ ಬೈ ಎಲೆಕ್ಷನ್ ಶರತ್ತು : ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಶರತ್
ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.
ಬೆಂಗಳೂರು, [ಅ. 31]: ಹೊಸಕೋಟೆ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಸಂಸದ ಬಚ್ಚೇಗೌಡ ಮಗ ಶರತ್ ಬಚ್ಚೇಗೌಡ ಕಣಕ್ಕಿಳಿಯೋದು ಪಕ್ಕಾ ಆಗಿದೆ.
ಇದಕ್ಕೆ ಪೂರಕವೆಂಬಂತೆ ಶರತ್ ತಮ್ಮ ಕಾರ್ಯಕರ್ತರಿಗಾಗಿ ಸಂದೇಶ ರವಾನಿಸಿದ್ದಾರೆ. ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿದು ಹೊಸಕೋಟೆ ಉಪ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸಂಸದ ಬಚ್ಚೇಗೌಡ ಅವರ ಮಗ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಖಚಿತಪಡಿಸಿದ್ದಾರೆ. ಹಾಗಾದ್ರೆ ಶರತ್ ಏನೆಲ್ಲ ಮಾತನಾಡಿದ್ದಾರೆ ಎನ್ನವುದನ್ನು ವಿಡಿಯೋನಲ್ಲಿ ನೋಡಿ.