ಹಿರೇಕೆರೂರು ಉಪಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ‌:ಸ್ವಾಮೀಜಿಗೆ JDS ಗಾಳ

ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.18): ಹಾವೇರಿಯ ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ಅಚ್ಚರಿಯ ಬೆಳವಣಿಗೆ‌ ನಡೆದಿದೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆಯಾಗಿದೆ.

ರಾತ್ರೋರಾತ್ರಿ ಚಿಕ್ಕಬಳ್ಳಾಪುರ JDS ಅಭ್ಯರ್ಥಿ ಬದಲಾವಣೆ: ಏನಿದು ಗೌಡ್ರ ತಂತ್ರ..?

ಅನರ್ಹ ಶಾಸಕ ಬಿ.ಸಿ.ಪಾಟೀಲ ರಾಜೀನಾಮೆಯಿಂದ ತೆರವಾಗಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಈಗಾಗಲೇ ಜೆಡಿಎಸ್ ಉಜಿನೆಪ್ಪ ಕೋಡಿಹಳ್ಳಿ ಎಂಬುವರಿಗೆ ಟಿಕೆಟ್ ಘೋಷಿಸಿತ್ತು. 

ಆದರೆ ಇದ್ದಕ್ಕಿದ್ದಂತೆ ಜೆಡಿಎಸ್ , ದಿಢೀರ್ ಅಂತ ಉಜಿನಪ್ಪ ಕೋಡಿಹಳ್ಳಿ ಅವರನ್ನ ಬದಲಿಸಿ ಸ್ವಾಮೀಜಿಗೆ ಟಿಕೆಟ್ ನೀಡಿದೆ ಎಂದು ಮಾಹಿತಿ ತಿಳಿದುಬಂದಿದೆ. ಯಾರು ಆ ಸ್ವಾಮೀಜಿ..? ಅಂತಿಮ ಕ್ಷಣದಲ್ಲಿ ಜೆಡಿಎಸ್ ನಿಲುವು ಬದಲಿಸಿದ್ಯಾಕೆ..? ವಿಡಿಯೋನಲ್ಲಿ ನೋಡಿ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video