Karnataka Politics ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿರೋದು ನಿಜ, ಬಾಂಬ್ ಸಿಡಿಸಿದ ಸಿದ್ದರಾಮಯ್ಯ
ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿರೋದು ನಿಜ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ನಿಜ ಎನಿಸಿದೆ
ಬಾಗಲಕೋಟೆ (ಜ.24): ಕೆಲ ಬಿಜೆಪಿ ಶಾಸಕರು, ಸಚಿವರು ಮುಂದಿನ ಚುನಾವಣೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಮನೆಗೆ ಹೋಗಿ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ ಎಂದು ಬಸನಗೌಡ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
Karnataka Politics ಮುಂದಿನ ಎಲೆಕ್ಷನ್‌ಗೆ ಡಿಕೆಶಿ, ಸಿದ್ದು ಬಳಿ ಟಿಕೆಟ್ ಬುಕ್ ಮಾಡಿಕೊಂಡ್ರಾ ಬಿಜೆಪಿ ಶಾಸಕರು?
ಇದಕ್ಕೆ ಇದೀಗ ಸಿದ್ದರಾಮಯ್ಯ ಸಹ ನಿಜ ಎಂದಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿರೋದು ನಿಜ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.