Karnataka Government Formation: ಐದು ಗ್ಯಾರಂಟಿಗಳ ಬಗ್ಗೆ ಮೊದಲ ಕ್ಯಾಬಿನೆಟ್‌ನಲ್ಲೇ ನಿರ್ಧಾರ!
ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪಟ್ಟಾಭಿಷೇಕ ನಡೆಯಲಿದೆ. ಆದರೆ, ಮಂತ್ರಿಗಿರಿಯ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.
ಬೆಂಗಳೂರು (ಮೇ. 19): ಕಾಂಗ್ರೆಸ್ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಕಾರಣವಾದ ಐದು ಗ್ಯಾರಂಟಿಗಳ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಘೋಷಣೆ ಆಗುವ ಸಾಧ್ಯತೆ ಇದೆ. ಎಲ್ಲರಿಗೂ ಈ ಗ್ಯಾರಂಟಿ ಯೋಜನೆಗಳನ್ನು ನೀಡೋದಾದರೆ 62 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ.
ಈ ನಡುವೆ ಶನಿವಾರ ಅಧಿಕೃತವಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿರುವುದು ಸಿಎಂ ಹಾಗೂ ಡಿಸಿಎಂ ಅವರದ್ದು ಮಾತ್ರ. ಆದರೆ, ಎಷ್ಟು ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಮೂಲಗಳ ಪ್ರಕಾರ 28 ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
'ಚಿಪ್ ಕೂಡ ವಾಪಾಸ್ ಕೊಡ್ಬೇಕಾ?..' ಇತಿಹಾಸದ ಪುಟ ಸೇರಿದ 2 ಸಾವಿರ ರೂಪಾಯಿ ನೋಟು ಫುಲ್ ಟ್ರೋಲ್!
ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿ ಹೊರತು ಪಡಿಸಿ ಬೇರೆ ಪಕ್ಷಗಳು ಅಧಿಕಾರದಲ್ಲಿರುವ 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಕಂಠೀರವ ಸ್ಟೇಡಿಯಂ ಸಾಕ್ಷಿಯಾಗಲಿದೆ.