ಅಖಂಡ ಪರ ಸಿದ್ದರಾಮಯ್ಯ ಜಮೀರ್‌ ಲಾಬಿ,ಖರ್ಗೆ ಮುಂದೆ ಬಿಗಿಪಟ್ಟು

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ.  

Share this Video
  • FB
  • Linkdin
  • Whatsapp

ಮುಂದಿನ ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಟ್ಟು 43 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಪ್ರಕಟಿಸಿದೆ.ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದಾರೆ. ಟಿಕೆಟ್ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪಕ್ಷದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಆದರೆ ಇವತ್ತು ಒಂದು ದಿನ ಕಾಯುವಂತೆ ಅಖಂಡಗೆ ಸಿದ್ದು ಸೂಚನೆ ನೀಡುದ್ದು, ಹೀಗಾಗಿ ಶ್ರೀನಿವಾಸಮೂರ್ತಿಗೆ ಟಿಕೆಟ್‌ ನೀಡಲು ಸಿದ್ದರಾಮಯ್ಯ , ಜಮೀರ್‌ ಮಲ್ಲಿಕಾರ್ಜುನ್‌ ಖರ್ಗೆ ಮುಂದೆ ಬಿಗಿಪಟ್ಟು ಹಿಡಿದಿದ್ದಾರೆ. ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಖಂಡ ಪರ ಸಿದ್ದು ಬ್ಯಾಟಿಂಗ್‌ ಬೀಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video