ಅಭ್ಯರ್ಥಿ ಆಯ್ಕೆ: ಪಶ್ಚಾತಾಪ ಪಟ್ಟ ಸಿದ್ದರಾಮಯ್ಯರಿಂದ ಕ್ಷಮೆಯಾಚನೆ..!
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೆ.ಆರ್.ಪುರಂ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ ಪ್ರಸಂಗ ನಡೆಯಿತು.
ಬೆಂಗಳೂರು, [ನ.03]: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೆ.ಆರ್.ಪುರಂ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ ಪ್ರಸಂಗ ನಡೆಯಿತು.
ಈ ಹಿಂದೆ ಭೈರತಿ ಸುರೇಶ್ ಗೆ ಬಸವರಾಜ್ ಗೆ ಟಿಕೇಟ್ ಕೊಟ್ರಿ. ಆದ್ರೆ, ಇದೀಗ ಅವರಿಂದ ಅನ್ಯಾಯ ಆಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಘೇರಾವ್ ಹಾಕಿದ ಪ್ರಸಂಗ ನಡೆದಿದೆ. ಈ ವೇಳೆ, ಪರಿಸ್ಥಿತಿ ಅರಿತ ಸಿದ್ದರಾಮಯ್ಯ ಕಾರ್ಯಕರ್ತರ ಕ್ಷಮೆಯಾಚಿಸಿದ ಘಟನೆಯೂ ನಡೆಯಿತು.