ಎಲ್ಲಿ ಸ್ಪರ್ಧಿಸುತ್ತಾರೆ ಮಾಜಿ ಸಿಎಂ ಸಿದ್ದರಾಮಣ್ಣ? ಚಾಮರಾಜನಗರದತ್ತ ವಿ ಸೋಮಣ್ಣ!
ಮಾ.23ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಬೆಂಬಲಿಗರ ಒತ್ತಡಕ್ಕೆ ಮಣಿದು ಕೋಲಾರದಲ್ಲಿ ಅಖಾಡಕ್ಕಿಳಿಯುತ್ತಾರಾ ಸಿದ್ದು, ಚಾಮರಾಜನಗರದಲ್ಲಿ ನಿಲ್ಲಲು ಹೈಕಮಾಂಡ್ ಸೂಚನೆ, ಸೋಮಣ್ಣ ಸ್ಫೋಟಕ ಮಾತು, ಅಮೃತಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಹರಸಾಹಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಿಲ್ಲ ಅನ್ನೋ ಮಾತು ಹೊರಬೀಳುತ್ತಿದ್ದಂತೆ ಇದೀಗ ಕೋಲಾರದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇಂದು ಸಿದ್ದು ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು, ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ.ಕೋಲಾರ, ಬಾದಮಿ, ವರುಣಾ ಸೇರಿದಂತೆ ಕೆಲ ಕ್ಷೇತ್ರಗಳಿಂದ ಸಿದ್ದು ಸ್ಪರ್ಧೆ ಅನ್ನೋ ಮಾತು ಕೇಳಿಬರುತ್ತಿದೆ. ಇತ್ತ ಕೋಲಾರದ ಬೆಂಬಲಿಗರು ಸಿದ್ದು ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸ್ವತಂತ್ರರು. ಯಾವ ಕ್ಷೇತ್ರದಲ್ಲಿ ನಿಂತರೂ ಕಾಂಗ್ರೆಸ್ ಅವರಿಗೆ ಅವಕಾಶ ಮಾಡಿಕೊಡಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಮಹಾನ್ ನಾಯಕ ಸಿದ್ದರಾಮಯ್ಯನವರಿಗೆ ಈ ಪರಿಸ್ಥಿತಿ ಬಂದಿದೆ ಎಂದು ನನಗೆ ಮಾತ್ರವಲ್ಲ ಹಲವರಿಗೆ ಅನುಕಂಪ ಬಂದಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಬಿಜೆಪಿ ನಾಯಕ ವಿ ಸೋಮಣ್ಣ ಪಕ್ಷ ಬಿಡಲಿದ್ದಾರೆ ಅನ್ನೋ ಮಾತುಗಳು ತಣ್ಣಗಾದ ಬೆನ್ನಲ್ಲೇ ಇದೀಗ ಹೊಸ ವಿಚಾರ ಮುನ್ನಲೆಗೆ ಬಂದಿದೆ. ಚಾಮರಾಜನಗರದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದಿದ್ದಾರೆ. ಇಷ್ಟೇ ಅಲ್ಲ 6 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ.