Asianet Suvarna News Asianet Suvarna News

ಚುನಾವಣೆ ದಿನ ಹತ್ತಿರ ಬರುತ್ತಿದ್ದಂತೆಯೇ ಕಗ್ಗಂಟಾಗಿದೆ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ!

ಕೋಲಾರದಿಂದ ಸ್ಪರ್ಧಿಸುವ ವಿಚಾರ ಕೈಬಿಟ್ಟಿದ್ದು, ಈವರೆಗೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಎಂಬ ಬಗ್ಗೆ ಸ್ಪಷ್ಟ ನಿಲುವು ಸಿಕ್ಕಿಲ್ಲ. ಹೀಗಾಗಿ ಸಿದ್ದು ಕ್ಷೇತ್ರ ಆಯ್ಕೆ ದಿನದಿಂದ ದಿನಕ್ಕೆ ಕಗ್ಗಂಟಾಗಿದೆ. 

ಕೋಲಾರ ಸೂಕ್ತ ಅಲ್ಲ, ನೀವು ವರುಣಾದಿಂದಲೇ ಸ್ಪರ್ಧೆ ಮಾಡಿ, ನಿಮ್ಮ ಪ್ರತಿ ಒಂದು ನಿಮಿಷವೂ ಪಕ್ಷಕ್ಕೆ ಅಗತ್ಯವಾಗಿದೆ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಅಂತ ಹೇಳಲಾಗಿದೆ. ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಕೋಲಾರದಿಂದ ಸ್ಪರ್ಧಿಸುವ ವಿಚಾರ ಕೈಬಿಟ್ಟಿದ್ದು, ಈವರೆಗೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧೆ ಮಾಡ್ತಾರೆ ಎಂಬ ಬಗ್ಗೆ ಸ್ಪಷ್ಟ ನಿಲುವು ಸಿಕ್ಕಿಲ್ಲ. ಹೀಗಾಗಿ ಸಿದ್ದು ಕ್ಷೇತ್ರ ಆಯ್ಕೆ ದಿನದಿಂದ ದಿನಕ್ಕೆ ಕಗ್ಗಂಟಾಗಿದೆ.