Asianet Suvarna News Asianet Suvarna News

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಕಾಂಗ್ರೆಸ್‌ನ ಮಡಿಕೇರಿ ಚಲೋ ರದ್ದು!

ಕೊಡಗು ಪ್ರವಾಸದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ  ವಿರೋಧಿಸಿ ಹಿಂದುಳಿದ ವರ್ಗಗಳ ವೇದಿಕೆ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ರದ್ದುಗೊಂಡಿದೆ.

First Published Aug 23, 2022, 2:59 PM IST | Last Updated Aug 23, 2022, 2:59 PM IST

ಕೊಡಗು ಪ್ರವಾಸದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ಹೀಗಾಗಿ ಇದೇ ಆಗಸ್ಟ್ 26ರಂದು ಮೊಟ್ಟೆ ದಾಳಿ ಖಂಡಿಸಿ ಕಾಂಗ್ರೆಸ್ ಮಡಿಕೇರಿ ಚಲೋ ಹಮ್ಮಿಕೊಂಡಿತ್ತು. ಆದರೆ ಇದೀಗ ಮಡಿಕೇರಿ ಚಲೋ ರದ್ದುಗೊಂಡಿದೆ. ಪೊಲೀಸ್ ಇಲಾಖೆ ಮಡಿಕೇರಿ ಚಲೋಗೆ ಅವಕಾಶ ನೀಡುವುದಿಲ್ಲ ಎಂದಿದ್ದು, ಕೊಡಗಿನ ಮೂರು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕೈಗೊಂಡಿದೆ. ಮೊಟ್ಟೆ ಎಸೆತದ ಬಗ್ಗೆ ತನಿಖೆ ನಡೆದಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಬೇರೆ ಬೇರೆ ಜಿಲ್ಲೆಗಳಿಂದ ಜನರು ಬರುವ ಹಿನ್ನೆಲೆಯಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಪೊಲೀಸ್ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ವೇದಿಕೆ ರದ್ದುಗೊಳಿಸಿದೆ.

Video Top Stories