Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣದಲ್ಲಿ ಹಲವು ಸ್ಟಾರ್‌ ನಟ -ನಟಿಯರು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಅವರು ಗೆಲ್ಲಲೇಬೇಕು ಎಂಬುದು ಅಭಿಮಾನಿಗಳ ಆಸೆಯಾಗಿದೆ.

First Published May 7, 2023, 11:12 AM IST | Last Updated May 7, 2023, 11:12 AM IST

ಮೈಸೂರು: ಪ್ರತಿಷ್ಟಿತ ಕ್ಷೇತ್ರವಾದ ವರುಣದಲ್ಲಿ ಚುನಾವಣಾ ಅಖಾಡ ಗರಿಗೆದರಿದ್ದು, ಇಲ್ಲಿ ಗೆಲ್ಲಲೇ ಬೇಕು ಎಂದು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಆದ್ರೆ ಈ ಕ್ಷೇತ್ರದಿಂದ ಗೆದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಹಿನ್ನೆಲೆ ಇದು ಅವರಿಗೆ ಲಕ್ಕಿ ವಿಧಾನಸಭಾ ಕ್ಷೇತ್ರವಾಗಿದೆ. ಹಾಗಾಗಿ ಸಿದ್ದರಾಮಯ್ಯರನ್ನು ಗೆಲ್ಲಿಸಲೇಬೇಕು ಎಂದು ಹಲವು ಕಡೆಯಿಂದ ಅವರ ಅಭಿಮಾನಿಗಳು ಬಂದಿದ್ದು, ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಸದ್ಯ ನಟ ದುನಿಯಾ ವಿಜಯ್‌ ಸಹ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರ ಅಭಿಮಾನಿ. ಅವರು ಅಂದ್ರೆ ನನಗೆ ಬಹಳ ಇಷ್ಟ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ನಟ ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಸಹ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಾರೆ.

Video Top Stories