ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ: ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿ ಕಾರ್ಯಕರ್ತನೊಬ್ಬ ದೀರ್ಘದಂಡ ನಮಸ್ಕಾರದೊಂದಿಗೆ ಕೂಡಸಂಗಮಕ್ಕೆ ಪಾದಯಾತ್ರೆ ಹೊರಟಿದ್ದಾನೆ.

Share this Video
  • FB
  • Linkdin
  • Whatsapp

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಸಿ ಕೈ ಕಾರ್ಯಕರ್ತನೊಬ್ಬ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದಾರೆ.ಕೂಡಲಸಂಗಮಕ್ಕೆ ಪಾದಯಾತ್ರೆಯೊಂದಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸುರೇಶ ವಾಲೀಕಾರ ಹೊರಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮನ್ನಿಕಟ್ಟಿ ಗ್ರಾಮದಿಂದ ಕೂಡಲಸಂಗಮಕ್ಕೆ ಸುರೇಶ ಹೊರಟಿದ್ದಾರೆ. 35 ಕಿಮೀ ದೀರ್ಘದಂಡ ನಮಸ್ಕಾರವನ್ನು ಮಾಡಲಿದ್ದಾರೆ. ಮೇಟಿ ಗೆಲುವು ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಆಗಲೆಂದು ಹಾರೈಸಿ ಪಾದಯಾತ್ರೆ ಹೊರಟಿದ್ದಾರೆ. ಇವರಿಗೆ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ವಾದ್ಯ ಮೇಳಗಳೊಂದಿಗೆ ಪಾದಯಾತ್ರೆ ಹೊರಟಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

Related Video