'ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ, ಸಿಎಂ ಕುರ್ಚಿಯದ್ದೇ ಜಪ ಮಾಡ್ತಾರೆ.'

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಮತ್ತೊಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಆಗಾಗ ಮಾತನಾಡುತ್ತಾರೆ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 13): ಹೋದಲ್ಲಿ ಬಂದಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯದ್ದೇ ಜಪವಂತೆ..! ಹೀಗಂತ ಎಚ್ ವಿಶ್ವನಾಥ್ ಟಾಂಗ್ ನೀಡಿದ್ಧಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್‌ ಇದ್ದಂತೆ. ಟ್ರಂಪ್‌ ಕೂಡ ಸೋಲು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಅದೇ ರೀತಿ ಸಿದ್ದರಾಮಯ್ಯ ಕೂಡ ಸೋಲನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಟ್ರಂಪ್‌ಗೆ ಹೋಲಿಸಿದ ರೀತಿ.

ಮಾಸ್ಕ್ ತಂದ ತಲೆನೋವು, ಹೆಚ್ಚುತ್ತಿದೆ ಮೊಡವೆ, ಗುಳ್ಳೆಗಳು, ಹೆಂಗಳೆಯರು ಕಂಗಾಲು..!

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಮತ್ತೊಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಆಗಾಗ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

Related Video