ನಕಲಿ ದೇಶಪ್ರೇಮಿಗಳ ಬಾಯಿ ಮುಚ್ಚಿಸಬೇಕಿದೆ: RSS ವಿರುದ್ಧ ಗುಡುಗಿದ ಸಿದ್ದರಾಮಯ್ಯ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ. ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರು, (ಆಗಸ್ಟ್.09): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಹರ್ ಘರ್ ತಿರಂಗ'ಕ್ಕೆ ಕರೆ ಕೊಟ್ಟಿದ್ದಾರೆ. ಹಿನ್ನೆಯಲ್ಲಿ ರಾಜ್ಯದಲ್ಲೂ ಸಹ ಬಿಜೆಪಿ ನಾಯಕರು ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಮಾಡುತ್ತಿದ್ದಾರೆ.
ಬಿಜೆಪಿಯವರು ತ್ರಿವರ್ಣಧ್ವಜಕ್ಕೆ ಗೌರವ ಕೊಡುವವರಲ್ಲ: ಸಿದ್ದರಾಮಯ್ಯ
ಆದ್ರೆ, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್ ಕಚೇರಿಯಲ್ಲಿ ನಮ್ಮ ದೇಶದ ತ್ರಿವರ್ಣ ಧ್ವಜ ಹಾರಿಸಲ್ಲ. ಇದೇ ಗೋಲ್ವಾಲ್ಕರ್, ಸಾರ್ವಕರ್ ತ್ರಿವರ್ಣ ಧ್ವಜವನ್ನು ವಿರೋಧ ಮಾಡಿದವರು. ಈಗ ಹರ್ ಘರ್ ತಿರಂಗ ಎಂದು ನಕಲಿ ದೇಶಪ್ರೇಮ ಎಂದು ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.