Asianet Suvarna News Asianet Suvarna News

ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು, (ಜ.23): ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ವಿಶ್ವಕ್ಕೆ ಆಸರೆಯಾದ ಭಾರತ, ಮದ್ವೆಯಾಗ್ತಿದ್ದಾರ ರಚಿತಾ? ಜ.23ರ ಟಾಪ್ 10 ಸುದ್ದಿ!

ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭೇಟಿಗೆಂದು ಕುಮಾರಕೃಪಾ ಸಮೀಪದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸ ಪಕ್ಕದ ಮನೆಯ ಮುಂದೆ ಕಾರು ನಿಲ್ಲಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೆಯವರು ಕಾರು ಯಾಕೆ ಮನೆ ಮುಂದೆ ಹಾಕಿದ್ರಿ ಎಂದು ಕಾರ್ಯರ್ತರ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದಾರೆ.

Video Top Stories