ಪಶ್ಚಾತಾಪಕ್ಕಿಂತ ದೊಡ್ಡ ಶಿಕ್ಷೆ ಇಲ್ಲ: ಖರ್ಗೆ ವಿಷ ಸರ್ಪ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪಶ್ಚಾತ್ತಾಪಕ್ಕಿಂತ ಬೇರೆ ಶಿಕ್ಷೆ ಇಲ್ಲ ಅಲ್ವಾ ಎಂದು ಸಿದ್ದಾಮಯ್ಯ ರಾಯಚೂರಿನಲ್ಲಿ ಪ್ರಶ್ನಿಸಿದ್ದಾರೆ.
ರಾಯಚೂರು: ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ರು, ಅಲ್ಲದೇ ಇದಕ್ಕೆ ಅವ್ರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಖರ್ಗೆ ಈಗಾಗಲೇ ಯಾರಿಗಾದ್ರೂ ನೋವಾಗಿದ್ರೆ, ವಿಷಾಧ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಪಶ್ಚಾತ್ತಾಪಕ್ಕಿಂತ ಬೇರೆ ಶಿಕ್ಷೆಯಿಲ್ಲ ಅಲ್ವಾ ?. ನಾನು ಯತ್ನಾಳ್ ಹೇಳಿಕೆಗೆಲ್ಲಾ ಉತ್ತರಕೊಡೋಕೆ ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ.
ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್: ಸಹೋದರನ ಪರ ಸೊರಬದಲ್ಲಿ ಪ್ರಚಾರ