ಕೆಪಿಸಿಸಿ ಅಧ್ಯಕ್ಷ ಹುದ್ದೆ: ಗಂಟೆಗಟ್ಟಲೇ ಮಾತುಕತೆ ನಡೆದ್ರೂ ಬಾಯ್ಬಿಡದ ಸಿದ್ದು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಹುತೇಕ ಡಿಕೆಶಿಗೆ ಕೆಪಿಸಿಸಿ ಪಟ್ಟ ಕಟ್ಟಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಸಿದ್ದರಾಮಯ್ಯ ತಮ್ಮ ಆಪ್ತ ನಾಯಕನಿಗೆ ಪಟ್ಟ ಕಟ್ಟಲು ದೆಹಲಿಯಲ್ಲಿ ಇನ್ನಿಲ್ಲಿದ ಕಸರತ್ತು ನಡೆಸಿದ್ದಾರೆ.
ದೆಹಲಿ/ಬೆಂಗಳೂರು,(ಜ.14): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡಿದೆ.
ದೆಹಲಿಯಲ್ಲಿ ಸಿದ್ದರಾಮಯ್ಯ ಸಭೆ: ಕೆಪಿಸಿಸಿಗೆ ನೂತನ ಸಾರಥಿ ಯಾರು?
ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೂ ಮುನ್ನ ಇಂದು (ಮಂಗಳವಾರ) ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜತೆ ಸಭೆ ನಡೆಸಿದರು.