
'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'
ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC
ಹಿಂದೂಗಳನ್ನು ಪ್ರಚೋದಿಸುವುದು ಇವರ ಉದ್ದೇಶ. ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ದೇಶ, ರಾಜ್ಯ ಅಭಿವೃದ್ಧಿ ಆಗುವುದಿಲ್ಲ. ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ ಭಾಷೆ, ಧರ್ಮ, ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.