ಡಿಸಿಎಂ ಆಯ್ತು, ಈಗ ಸಿಎಂ ಸಿದ್ದರಾಮಯ್ಯ ಓಪನ್ ಆಫರ್‌ !

ಕಾಂಗ್ರೆಸ್‌ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಅವರಿಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಮೈಸೂರು : ಕಾಂಗ್ರೆಸ್ (Congress) ಪಕ್ಷಕ್ಕೆ ಘರ್ ವಾಪಸಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿ, ಕೇವಲ ಪಕ್ಷ ಬಿಟ್ಟಿದ್ದವರು ಮಾತ್ರವಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದ್ದಾರೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಮೈಸೂರಿನಲ್ಲಿ(Mysore) ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ(BJP) ಎಲ್ಲಿದೆ ರೀ, ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ. ಸರ್ಕಾರ ಬಂದು ನೂರು ದಿನ‌ ಆಗಿದೆ ಎಂದು ವ್ಯಂಗ್ಯವಾಡಿದರು. ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರವಾಗಿ ಮಾತನಾಡಿದ ಅವರು, ಮೋದಿನೇ ಇವರನ್ನ ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಮೈಸೂರಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಯಾರಾಗ್ತಾರೆ 'ಕೈ' ಅಭ್ಯರ್ಥಿ..?

Related Video